ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್.ಚಲವಾದಿ ವಿರುದ್ಧ ಬಂದಿರುವ ದೂರುಗಳ ಸತ್ಯಾಸತ್ಯತೆ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ 30 ದಿನದೊಳಗೆ ವರದಿ ಸಲ್ಲಿಸಲು ರಾಜ್ಯ ಪತ್ರಾಗಾರ ಇಲಾಖೆ ನಿರ್ದೇಶಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರಾಥಮಿಕ ತನಿಖಾ ಸಮಿತಿ ರಚಿಸಲಾಗಿದೆ.
ಮಹಿಳಾ ಕಲಾವಿದರಿಗೆ ಸಂಭಾವನೆ ನೀಡಲು ಹಾಗೂ ಧನ ಸಹಾಯ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ದಲಿತ ಸಂಘಟನೆಗಳ ಒಕ್ಕೂಟ ಮತ್ತು ಕಲಾವಿದರ ಸಂಘಟನೆಗಳ ಒಕ್ಕೂಟದ ಮಹಿಳಾ ಸದಸ್ಯರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಹಾಗಾಗಿ ಅಧಿಕಾರಿ ವಿರುದ್ಧ ತನಿಖೆ ನಡೆಸಿ, ಕೈಗೊಂಡ ಕ್ರಮದ ವರದಿಯನ್ನು ಕಳುಹಿಸಬೇಕು ಎಂದು ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.