ಬೆಂಗಳೂರು: ಕರ್ನಾಟಕ ಸ್ವಾಭಿಮಾನಿ ವೇದಿಕೆ ನೀಡುವ ‘ಚಂಪಾ ಸಿರಿಗನ್ನಡ’ ಪ್ರಶಸ್ತಿಗೆ ಬರಹಗಾರ, ಕನ್ನಡ ಹೋರಾಟಗಾರ ಬೆಳಗಾವಿಯ ಅಶೋಕ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಸ್ವಾಭಿಮಾನಿ ವೇದಿಕೆಯನ್ನು ಚಂದ್ರಶೇಖರ ಪಾಟೀಲ ಅವರು ಸ್ಥಾಪಿಸಿದ್ದರು. ಈ ವೇದಿಕೆ 15 ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, 2023ರಿಂದ ಚಂಪಾ ಸಿರಿಗನ್ನಡ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವೇದಿಕೆಯ ಶಂಕರ ಹೂಗಾರ್ ತಿಳಿಸಿದ್ದಾರೆ.
ಪ್ರಶಸ್ತಿಯು ₹ 10 ಸಾವಿರ ನಗದು, ಕಂಚಿನ ಫಲಕ ಪ್ರಶಸ್ತಿ ಪತ್ರ ಹೊಂದಿದೆ. ದಿ. ಚಂದ್ರಶೇಖರ ಪಾಟೀಲರ ಜನ್ಮ ದಿನವಾದ ಜೂನ್ 18ರಂದು ಸಂಜೆ 4.30ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಬರಹಗಾರ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆ ವಹಿಸುವರು. ಕನ್ನಡ ಹೋರಾಟಗಾರರಾದ ಸಿ.ಕೆ. ರಾಮೇಗೌಡ, ಮೀನಾ ಪಾಟೀಲ ಅತಿಥಿಗಳಾಗಿರುವರು ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.