ADVERTISEMENT

ಆರೋಪಿಗಳ ವಿರುದ್ಧ ಕ್ರಮಕ್ಕೆ ಸಿ.ಎನ್. ಅಶ್ವತ್ಥನಾರಾಯಣ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 16:18 IST
Last Updated 3 ಸೆಪ್ಟೆಂಬರ್ 2025, 16:18 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ಧರ್ಮಸ್ಥಳ ಚಲೊ ವೇಳೆ ಬಿಜೆಪಿ ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳ ವಿಡಿಯೊ ಸೆರೆಹಿಡಿದು ಕೀಳುಮಟ್ಟದ ಬರಹ ಹಾಕಿದ್ದ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದರು.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಅವರು ಮಾತನಾಡಿ, ಸೌಜನ್ಯ ಪ್ರಕರಣದಲ್ಲಿ ಯಾವುದೇ ಒಪ್ಪಂದದ ನಡೆ ಇಲ್ಲ. ಸೌಜನ್ಯ ಅವರ ತಾಯಿ ಇಟ್ಟಿರುವ ಬೇಡಿಕೆಯ ಪರವಾಗಿ ಇರುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟಿದ್ದಾರೆ ಎಂದರು.

‘ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಆರೋಪಿಗಳು ಹಾಕಿರುವ ಕಂಟೆಂಟನ್ನು ತೆಗೆಸಿಹಾಕಬೇಕು‘ ಎಂದು ಒತ್ತಾಯಿಸಿದರು.

ADVERTISEMENT

ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ ಕುಮಾರ, ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.