ADVERTISEMENT

ಕರ್ತವ್ಯನಿರತ ಎಎಸ್‌ಐ ಚಂದ್ರಶೇಖರಯ್ಯ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 19:42 IST
Last Updated 1 ಸೆಪ್ಟೆಂಬರ್ 2018, 19:42 IST
ಚಂದ್ರಶೇಖರಯ್ಯ
ಚಂದ್ರಶೇಖರಯ್ಯ   

ಬೆಂಗಳೂರು: ಹೊಯ್ಸಳ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಚಂದ್ರಶೇಖರಯ್ಯ (56) ಹೃದಯಾಘಾತದಿಂದಾಗಿ ಶನಿವಾರ ಮೃತಪಟ್ಟಿದ್ದಾರೆ.

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಬೆಳಿಗ್ಗೆ 8 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಜೆ 5 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಸಹೋದ್ಯೋಗಿಗಳೇ ಅವರನ್ನು ಸ್ಥಳೀಯ ಲಕ್ಷ್ಮಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದರು ಎಂದು ಪೊಲೀಸರು ಹೇಳಿದರು.

ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.