ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಶಿವಶಂಕರಾಚಾರಿ (49) ಅವರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬೆಳಿಗ್ಗೆ ಠಾಣೆಗೆ ಬಂದಿದ್ದ ಅವರು ನಂತರ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದರು. ಅಲ್ಲಿ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲೇ ಮೃತಪಟ್ಟಿದ್ಧಾರೆ ಎಂದು ಮೂಲಗಳು ತಿಳಿಸಿವೆ.
ಶಿವಶಂಕರಾಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.