ADVERTISEMENT

ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ಮೇಲೆ ಹಲ್ಲೆ: ಖಂಡನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 20:16 IST
Last Updated 2 ನವೆಂಬರ್ 2025, 20:16 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ, ತಲೆ ಬೋಳಿಸಿದ ಕೃತ್ಯವನ್ನು ಸಂಗಮ ಹಾಗೂ ಎಂಜಿಎಸ್‌ಪಿ ಸಂಘಟನೆ ಖಂಡಿಸಿದೆ.

ವಿರಾಟನಗರ ಪ್ರದೇಶದಲ್ಲಿ ವಾಸವಿದ್ದ ಸುಕನ್ಯಾ ಅವರನ್ನು ಗುರುವಾರ ದುಷ್ಕರ್ಮಿಗಳು ಅಪಹರಿಸಿ ರೂಪೇನ ಅಗ್ರಹಾರಕ್ಕೆ ಕರೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿ, ಮರದ ಕಟ್ಟಿಗೆಯಿಂದ ಹೊಡೆದು, ಅವರ ತಲೆ ಬೋಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಿ, ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಆರೋಪಿಗಳ ಕಡೆಯವರು ಮಹಿಳೆಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಘಟನೆಯ ಪೂಜಾ, ವೈಶಾಲಿ, ನಿಶಾ ತಿಳಿಸಿದ್ದಾರೆ.

ADVERTISEMENT

ಸಂತ್ರಸ್ತೆಗೆ ಪೊಲೀಸ್ ರಕ್ಷಣೆ ಒದಗಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಜತೆ ಕೆಲಸ ಮಾಡುವ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಈ ರೀತಿಯ ಘಟನೆಗಳನ್ನು ತಡೆಯಬೇಕು. ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.