
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮನೆಗೆ ನುಗ್ಗಿ ತಾಯಿ ಹಾಗೂ ಮಗಳ ಜತೆಗೆ ಅನುಚಿತವಾಗಿ ವರ್ತಿಸಿದ್ದ ಗಾರೆ ಕೆಲಸಗಾರನನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆವಲಹಳ್ಳಿ ನಿವಾಸಿ ತರಬೇಶ್(30) ಬಂಧಿತ.
ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಾಯಿ ಹಾಗೂ ಮಗಳು ಇದ್ದರು. ಆ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿದ ಗಾರೆ ಕೆಲಸಗಾರ, ಅನುಚಿತವಾಗಿ ವರ್ತಿಸಿದ್ದಾನೆ. ಆರೋಪಿಯ ವರ್ತನೆಯಿಂದ ಗಾಬರಿಗೊಂಡ ತಾಯಿ ಹಾಗೂ ಮಗಳು ಜೋರಾಗಿ ಕಿರುಚಿಕೊಂಡರು. ಸಹಾಯಕ್ಕೆ ಕೋರಿದರು. ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಪರಾರಿ ಆಗಿದ್ದ ಎಂದು ಪೊಲೀಸರು ಹೇಳಿದರು.
ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.