ADVERTISEMENT

ಶಾಲಾ ವಿದ್ಯಾರ್ಥಿ ಮೇಲೆ ಹಲ್ಲೆ, ಸುಲಿಗೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 22:12 IST
Last Updated 24 ಜನವರಿ 2023, 22:12 IST
   

ಬೆಂಗಳೂರು: ಕಾಟನ್‌ಪೇಟೆ ಠಾಣೆ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಬೇರೆ ಶಾಲೆ ವಿದ್ಯಾರ್ಥಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

‘₹ 100 ಸುಲಿಗೆ ವಿಚಾರವಾಗಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅದನ್ನು ನೋಡಿದ್ದ ಪ್ರಾಂಶುಪಾಲರು, ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಗಾಯಾಳು ಹಾಗೂ ಆರೋಪಿಗಳು ಎಲ್ಲರೂ ಬಾಲಕರು. ಹೀಗಾಗಿ, ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗದು’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.