ADVERTISEMENT

ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ: ಬಂಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 2:29 IST
Last Updated 30 ಡಿಸೆಂಬರ್ 2021, 2:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ‘ತಿಪ್ಪಸಂದ್ರ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಶಾಸಕ ಎಸ್‌.ರಘು ಹಾಗೂ ಬೆಂಬಲಿಗರನ್ನು ಬಂಧಿಸಬೇಕು’ ಎಂದು ಎಎಪಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ನಮ್ಮ ಪಕ್ಷದ ಐವರು ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಬಿಮಾ ನಗರ ಪೊಲೀಸ್‌ ಠಾಣೆಗೆ ಬಂದ ಶಾಸಕ ರಘು ಅವರ ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ‌ಕಾರ್ಯಕರ್ತರು ದಾಂದಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT