ADVERTISEMENT

ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ನೆರವು

​ಪ್ರಜಾವಾಣಿ ವಾರ್ತೆ
Published 13 ಮೇ 2021, 21:16 IST
Last Updated 13 ಮೇ 2021, 21:16 IST
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಧನಸಹಾಯ ವಿತರಿಸಿದರು. ಸಚಿವ ಎಸ್‌.ಟಿ.ಸೋಮಶೇಖರ್‌ ಇದ್ದರು.
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಧನಸಹಾಯ ವಿತರಿಸಿದರು. ಸಚಿವ ಎಸ್‌.ಟಿ.ಸೋಮಶೇಖರ್‌ ಇದ್ದರು.   

ಬೆಂಗಳೂರು: ’ಸಚಿವ ಎಸ್. ಟಿ. ಸೋಮಶೇಖರ್ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ಸಂಕಷ್ಟದ ಈ ಕಾಲದಲ್ಲಿ ತಮ್ಮ ಕ್ಷೇತ್ರದ ಜನತೆಗೆ ವೈಯಕ್ತಿಕ ಧನಸಹಾಯ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ‘ ಎಂದು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಹೇರೋಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಎಸ್. ಟಿ. ಸೋಮಶೇಖರ್ ಅವರಿಂದ ವೈಯಕ್ತಿಕವಾಗಿ ₹1 ಲಕ್ಷ ಧನಸಹಾಯ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಸ್‌.ಟಿ.ಸೋಮಶೇಖರ್‌ ಮಾತನಾಡಿ, ‘ಕ್ಷೇತ್ರದ ಜನತೆಯ ಹಿತಕಾಯಲು 1 ಸಾವಿರ ಕೊರೊನಾ ವಾರಿಯರ್ಸ್‌ಗಳನ್ನು ನೇಮಕ ಮಾಡಲಾಗಿದ್ದು, ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿದೆ’ ಎಂದರು.

ADVERTISEMENT

ರಾಜರಾಜೇಶ್ವರಿನಗರದ ಜ್ಞಾನಭಾರತಿಯಕೋವಿಡ್ ಆರೈಕೆ ಕೇಂದ್ರದಲ್ಲಿ 341 ಬೆಡ್ ವ್ಯವಸ್ಥೆ ಇದೆ. ಇದರಲ್ಲಿ 101 ಆಮ್ಲಜನಕ ಬೆಡ್ ವ್ಯವಸ್ಥೆ ಮಾಡಲಾಗಿದೆ. ಆರೆಸ್ಸೆಸ್ ಜನಸೇವಾದವರು ಜನಸೇವಾ ಕೇಂದ್ರದಲ್ಲಿ ನೂರುಬೆಡ್ ವ್ಯವಸ್ಥೆ ಮಾಡಿದ್ದಾರೆ. ಹೇರೋಹಳ್ಳಿ ಹಾಗೂ ಕೆಂಗೇರಿಯಲ್ಲಿ ಎರಡು ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿವೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.