ADVERTISEMENT

ಸಹಾಯಕ ಕಮಾಂಡರ್‌ ಹುದ್ದೆ: ಯುನಿವರ್ಸಲ್‌ನ ಸಂತೋಷ್‌ಗೆ 89ನೇ ರ್‍ಯಾಂಕ್

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 20:54 IST
Last Updated 18 ಜೂನ್ 2025, 20:54 IST
upsc
upsc   

ಬೆಂಗಳೂರು: ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಸಹಾಯಕ ಕಮಾಂಡರ್‌ ಹುದ್ದೆಯ ಪರೀಕ್ಷೆಯಲ್ಲಿ ಯುನಿವರ್ಸಲ್‌ ಗ್ರೂ‍ಪ್‌ ಆಫ್‌ ಅಡ್ಮಿನಿಸ್ಟ್ರೇಷನ್‌ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದ ಸಂತೋಷ್ ಎಚ್.ಎಂ., ಅಖಿಲ ಭಾರತ ಮಟ್ಟದಲ್ಲಿ 89ನೇ ರ್‍ಯಾಂಕ್‌ ಪಡೆದಿದ್ದಾರೆ’ ಎಂದು ಸಂಸ್ಥೆಯ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ತಿಳಿಸಿದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ಈ ಪರೀಕ್ಷೆಯ ಫಲಿತಾಂಶ ಜೂನ್‌ 13ರಂದು ಪ್ರಕಟವಾಗಿದೆ. ಐಎಎಸ್‌, ಐಪಿಎಸ್, ಕೆಎಎಸ್‌ ಪರೀಕ್ಷೆಗೆ ಸಿದ್ಧತೆ ನಡೆಸಲು ಸಂತೋಷ್‌ ಅವರು ನಮ್ಮ ಸಂಸ್ಥೆಯಲ್ಲಿ ಮೂರು ವರ್ಷದ ಇಂಟಿಗ್ರೇಟೆಡ್‌ ಪದವಿಯನ್ನು ಪಡೆದಿದ್ದಾರೆ. ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ 8,036ಕ್ಕೂ ಹೆಚ್ಚು ಅಭ್ಯರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT