ADVERTISEMENT

1,500 ಉಚಿತ ಎಂಆರ್‌ಐ, ಸಿಟಿ ಸ್ಕ್ಯಾನ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 20:05 IST
Last Updated 25 ಮಾರ್ಚ್ 2021, 20:05 IST

ಬೆಂಗಳೂರು: ಮುಂದಿನ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 1,500 ಜನರಿಗೆ ಉಚಿತವಾಗಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಮಾಡುವುದಾಗಿ ಆಸ್ಟರ್ ಆಸ್ಪತ್ರೆಯು ಘೋಷಿಸಿದೆ.

ಆಸ್ಟರ್ ಡಿಎಂ ಹೆಲ್ತ್‌ಕೇರ್ ತನ್ನ 34ನೇ ಸಂಸ್ಥಾಪನಾ ದಿನದ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ನಡೆಸುತ್ತಿದೆ. 10 ಸಾವಿರ ಬಡ ರೋಗಿಗಳಿಗೆ ಉಚಿತವಾಗಿ ತಪಾಸಣೆ ಮಾಡುವ ಗುರಿ ಹಾಕಿಕೊಂಡಿದೆ.

ಈ ಯೋಜನೆ ಅಡಿಯಲ್ಲಿ ಇಲ್ಲಿನ ಆಸ್ಟರ್ ಆಸ್ಪತ್ರೆಯು ಉತ್ತರ ಬೆಂಗಳೂರಿನ ಯಲಹಂಕ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಅದೇ ರೀತಿ, ದಕ್ಷಿಣ ಬೆಂಗಳೂರಿನಲ್ಲಿ ಶ್ರೀಕೃಷ್ಣ ಸೇವಾ ಆಶ್ರಮ, ಸೇವಾಕ್ಷೇತ್ರ ಆಸ್ಪತ್ರೆ ಮತ್ತು ಆರ್‌.ವಿ. ಆಸ್ಪತ್ರೆ ಜತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಆಸ್ಪತ್ರೆಗಳು ಶಿಫಾರಸು ಮಾಡುವ ವ್ಯಕ್ತಿಗಳಿಗೆ ಉಚಿತವಾಗಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಮಾಡಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.