ADVERTISEMENT

‘ಕ್ಯಾಮ್ಸ್‌’ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 19:52 IST
Last Updated 29 ಜುಲೈ 2021, 19:52 IST

ಬೆಂಗಳೂರು: ಖಾಸಗಿ ಶಾಲಾ ಆಡಳಿತ ಮಂಡಳಿಗಳಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆದಿದ್ದು, ಅವರ ತೊಡೆ ಹಾಗೂ ಬಲಗೈಗೆ ಗಾಯವಾಗಿದೆ.

ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

‘ಮನೆಯ ಮುಂದೆ ಕಾರು ನಿಲ್ಲಿಸಿ ಇಳಿಯುವಾಗ ಶಶಿಕುಮಾರ್ ಮೇಲೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಆತ್ಮರಕ್ಷಣೆಗಾಗಿ ಶಶಿಕುಮಾರ್ ಪಿಸ್ತೂಲ್ ತೋರಿಸುತ್ತಿದ್ದಂತೆ ದುಷ್ಕರ್ಮಿಗಳು ಓಡಿಹೋಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.