ADVERTISEMENT

ಎಟಿಎಂನಲ್ಲಿ ಕಳವಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 1:36 IST
Last Updated 6 ಡಿಸೆಂಬರ್ 2019, 1:36 IST

ಬೆಂಗಳೂರು: ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಗುರುರಾಜ ಲೇಔಟ್‌ನ ಜೆಪಿಎನ್ ಇನ್‌ಸ್ಟಿಟ್ಯೂಟ್ ಬಳಿ ದುಷ್ಕರ್ಮಿಗಳು ಎಸ್‌ಬಿಐ ಎಟಿಎಂ ಯಂತ್ರ ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾರೆ.

ಡಿ.1ರಂದು ರಾತ್ರಿ ಕೃತ್ಯ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಕ್ಕೆ ಕಪ್ಪುಬಣ್ಣ ಬಳಿದಿದ್ದಾರೆ. ಬಳಿಕ ಎಟಿಎಂ ಯಂತ್ರದ ಕೆಳಗೆ ಕಬ್ಬಿಣದ ರಾಡ್‌ನಿಂದ ಒಡೆದು ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಯತ್ನ ವಿಫಲವಾಗಿದೆ.

‘ಸಿಸಿಟಿವಿ ಕ್ಯಾಮೆರಾದಲ್ಲಿ ದುಷ್ಕರ್ಮಿಗಳ ಮುಖಚಹರೆ ಸೆರೆಯಾಗಿದೆ. ಅದನ್ನು ಆಧರಿಸಿ ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.