ADVERTISEMENT

13 ಮಂದಿಗೆ ಆಟೊ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2018, 18:44 IST
Last Updated 9 ಅಕ್ಟೋಬರ್ 2018, 18:44 IST
ಬ್ಯಾಟರಾಯನಪುರ ಕ್ಷೇತ್ರದ ಥಣಿಸಂದ್ರ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಸೇನೆಯ ಆಶ್ರಯ ದಲ್ಲಿ 11ನೇ ವರ್ಷದ ಗಣೇಶೋತ್ಸವ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಫಲಾನುಭವಿ ಯೊಬ್ಬರಿಗೆ ಆಟೋ ವಿತರಿಸಲಾಯಿತು. ಕಾಂಗ್ರೆಸ್ ಮುಖಂಡ ಪಳನಿ ವೆಂಕಟೇಶ್, ಸಂಘದ ಅಧ್ಯಕ್ಷ ಸಿ.ಎಂ.ಅರುಣ್ಕುಮಾರ್ ಇತರರು ಇದ್ದಾರೆ.

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರದ ಥಣಿಸಂದ್ರ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಸೇನೆಯ ಆಶ್ರಯದಲ್ಲಿ 11ನೇ ವರ್ಷದ ಗಣೇಶೋತ್ಸವ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ 13 ಮಂದಿ ಆಟೊ ಚಾಲಕರಿಗೆ ಆಟೊ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಬಿಬಿಎಂಪಿ ಸದಸ್ಯೆ ಮಮತಾ ವೆಂಕಟೇಶ್, ‘ಈ ಭಾಗದಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ್ಗದ ಜನರೇ ಹೆಚ್ಚಾಗಿ ವಾಸಿಸುತ್ತಿದ್ದು, ಪ್ರತಿನಿತ್ಯದ ಜೀವನನಿರ್ವಹಣೆಗೂ ಕಷ್ಟಪಡುತ್ತಿದ್ದಾರೆ. ಹೀಗಾಗಿ ಅವರ ಜೀವನೋಪಾಯಕ್ಕೆ ನೆರವಾಗಲಿ ಎಂಬ ಉದ್ದೇಶದಿಂದ ಆಟೊಗಳನ್ನು ವಿತರಿಸಲಾಗಿದೆ’ ಎಂದರು.

ಪ್ರತಿ ಆಟೊಗೆ ₹ 80 ಸಾವಿರ ಸಹಾಯಧನ ನೀಡಲಾಗಿದೆ. ಫಲಾನುಭವಿಗಳು ಉಳಿದ ಹಣವನ್ನು ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯಬೇಕಾಗಿದೆ ಎಂದರು. ಕಾಂಗ್ರೆಸ್ ಮುಖಂಡ ಪಳನಿ ವೆಂಕಟೇಶ್, ಸಂಘದ ಅಧ್ಯಕ್ಷ ಸಿ.ಎಂ.ಅರುಣ್‌ ಕುಮಾರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.