
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾಸವಿ ಸಂಸ್ಥೆ ಆಯೋಜಿಸಿರುವ ಅವರೆಬೇಳೆ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಹಣ್ಣುಗಳ ರಾಜ ಮಾವು, ಕಾಳುಗಳ ರಾಜ ಅವರೆಕಾಯಿ. ಮಾಗಡಿ ಅವರೆಕಾಯಿ ತನ್ನ ಸೊಗಡಿಗೆ ಬಹಳ ಪ್ರಸಿದ್ಧಿ. ನನಗೂ ಅವರೆಕಾಳು ಎಂದರೆ ಬಹಳ ಇಷ್ಟ. ಬೆಂಗಳೂರಿನ ನಾಗರಿಕರಿಗೆ, ರೈತರಿಗೆ ಅನುಕೂಲವಾಗಬೇಕು. ಉದ್ಯೋಗ ಸೃಷ್ಟಿಯಾಗಬೇಕು ನಮ್ಮ ರೈತರ ಬೆಳೆಗೆ ಉತ್ತಮ ಬೆಳೆ ಸಿಗಬೇಕು. ಬೆಂಗಳೂರಿನ ಸುತ್ತಮುತ್ತಲ ಭಾಗದಲ್ಲಿ ಮಾತ್ರ ಇದನ್ನು ಬೆಳೆಯಲಾಗುತ್ತದೆ. ಹೀಗಾಗಿ ಇದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು’ ಎಂದರು.
‘ಕರ್ನಾಟಕದ ಈ ಖಾದ್ಯಗಳು, ರುಚಿ ಎಲ್ಲರಿಗೂ ತಲುಪುವಂತಾಗಬೇಕು. ರಾಜ್ಯದ ರೈತರಿಗೆ ಒಳ್ಳೆಯದಾಗಬೇಕು. ವಾಸವಿ ಸಂಸ್ಥೆಯವರು 26 ವರ್ಷಗಳಿಂದ ಈ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದಾರೆ. ನಾಗರಿಕರು ಬಂದು ರುಚಿ ಸವಿಯಲಿ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.