ADVERTISEMENT

ಜಾಗೃತಿ ಸಂದೇಶಗಳನ್ನು ಕನ್ನಡದಲ್ಲೇ ನೀಡಬೇಕು: ಟಿ.ಎಸ್. ನಾಗಾಭರಣ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 18:32 IST
Last Updated 22 ಅಕ್ಟೋಬರ್ 2021, 18:32 IST

ಬೆಂಗಳೂರು: ‘ಸಾಮಾಜಿಕ ಜಾಲತಾಣಗಳಲ್ಲಿಬೆಂಗಳೂರು ನಗರ ಪೊಲೀಸ್ ಕಚೇರಿಯು ಹಾಕುತ್ತಿರುವ ಜಾಗೃತಿ ಸಂದೇಶಗಳು ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತವೆ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಂಡು, ಜಾಗೃತಿ ಸಂದೇಶಗಳನ್ನು ಕನ್ನಡದಲ್ಲೇ ನೀಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೂಚಿಸಿದ್ದಾರೆ.

ಈ ಬಗ್ಗೆ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದಾರೆ. ‘ಸರ್ಕಾರಿ ಸುತ್ತೋಲೆಯ ಪ್ರಕಾರ ಕನ್ನಡವನ್ನು ರಾಜ್ಯದಾದ್ಯಂತ ಆಡಳಿತ ಭಾಷೆಯಾಗಿ ಎಲ್ಲ ಹಂತದಲ್ಲೂ ಕಡ್ಡಾಯವಾಗಿ ಜಾರಿಗೆ ತರಲಾಗಿದೆ. ಸರ್ಕಾರಿ ಇಲಾಖೆ ಹಾಗೂ ಕಚೇರಿಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆಗುವ ಅಡೆತಡೆಗಳಿಗೆ ಆಯಾ ಇಲಾಖೆಗಳ ಮುಖ್ಯಸ್ಥರನ್ನು ಜವಾಬ್ದಾರರನ್ನಾಗಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಬೆಂಗಳೂರು ನಗರ ಪೊಲೀಸ್ ಕಚೇರಿಯು ಕನ್ನಡಕ್ಕೆ ಆದ್ಯತೆ
ನೀಡಿ, ಎಲ್ಲೆಡೆ ಕನ್ನಡವನ್ನು ಬಳಸಬೇಕು’ ಎಂದು ತಿಳಿಸಿದ್ದಾರೆ.

‘ಸಾಮಾಜಿಕ ಜಾಲತಾಣಗಳಲ್ಲಿ ಇಂಗ್ಲಿಷ್‌ ಭಾಷೆಯ ಸಂದೇಶಗಳನ್ನು ಬಳಸುತ್ತಿರುವ ಬಗ್ಗೆ ಪರಿಶೀಲಿಸಿ, ಕನ್ನಡಲ್ಲಿಯೂ ಸಂದೇಶಗಳನ್ನು ಹಾಕುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.