ಆಯುಷ್ಮಾನ್ ಭಾರತ
ಬೆಂಗಳೂರು: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ (ಎಬಿ–ಎಆರ್‌ಕೆ) ಯೋಜನೆಯಡಿ ನಗರದ ನಾಲ್ಕು ಖಾಸಗಿ ಆಸ್ಪತ್ರೆಗಳಿಗೆ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳಿಗೆ (2ಎ) ಅವಕಾಶ ನೀಡಲಾಗಿದೆ. ಇದರಿಂದಾಗಿ ಫಲಾನುಭವಿಗಳು ಯಾವುದೇ ಶಿಫಾರಸು ಪತ್ರ ಪಡೆಯದೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.
ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು, ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಹಾಗೂ ಡಾ. ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಯೋಜನೆಯಡಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಒದಗಿಸಲು ಅನುಮತಿ ನೀಡಲಾಗಿದೆ. ಸದ್ಯ ಈ ವಿಧಾನದ ಚಿಕಿತ್ಸೆಗಳನ್ನು ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಒದಗಿಸಲಾಗುತ್ತಿತ್ತು.
ಒಂದು ವರ್ಷದ ಅವಧಿಗೆ ಪ್ರಾಯೋಗಿಕವಾಗಿ ನಾಲ್ಕು ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಇತರೆ ಚಿಕಿತ್ಸಾ ವಿಧಾನಗಳಿಗೂ ಶಿಫಾರಸು ಪ್ರಕ್ರಿಯೆಯ ವಿನಾಯಿತಿ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಕೊರತೆಯ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.