ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರ ಅಮಾನತು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿರಲಿದೆ ಎಂದು ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಆಗಿದ್ದ ಹಾಗೂ ಸದ್ಯ ಬಿಜೆಪಿ ವಕ್ತಾರ ಆಗಿರುವ ಭಾಸ್ಕರ್ ರಾವ್ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬೆಂಗಳೂರು ಕಾಲ್ತುಳಿತದಿಂದ ಸಿದ್ದರಾಮಯ್ಯ ಅವರು ಭಯಬೀತರಾಗಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಭೀಕರ ಕಾಲ್ತುಳಿತಕ್ಕೆ ಕಾರಣ ಪ್ರತಿಯೊಬ್ಬರಿಗೂ ಗೊತ್ತಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಇದಕ್ಕೆ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಉಂಟಾದ ಸಾವು–ನೋವಿನ ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಬಿ. ದಯಾನಂದ್ ಅವರ ಅಮಾನತಿಗೆ ಹಲವು ಬಿಜೆಪಿ ನಾಯಕರು ಸೇರಿದಂತೆ ಸಾರ್ವಜನಿಕರೂ ವಿರೋಧ ವ್ಯಕ್ತಪಡಿಸಿದ್ದಾರೆ.
ದಯಾನಂದ್ ಅವರ ಜಾಗಕ್ಕೆ ನಿನ್ನೆಯೇ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್‌ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.