ADVERTISEMENT

ಸೂರಜ್‌ ರೇವಣ್ಣ ಪ್ರಕರಣ: ‘ಬಿ’ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 16:09 IST
Last Updated 26 ಜೂನ್ 2025, 16:09 IST
ಸೂರಜ್‌ ರೇವಣ್ಣ 
ಸೂರಜ್‌ ರೇವಣ್ಣ    

ಪ್ರಜಾವಾಣಿ ವಾರ್ತೆ

ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಎರಡನೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ‘ಬಿ’ ಅಂತಿಮ ವರದಿ ಸಲ್ಲಿಸಿದ್ದಾರೆ.

ಈ ಸಂಬಂಧ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎರಡನೇ ಎಫ್‌ಐಆರ್‌ ಕುರಿತಂತೆ ತನಿಖೆ ನಡೆಸಿದ್ದ ತನಿಖಾಧಿಕಾರಿಗಳು, ‘ಬಿ’ ಅಂತಿಮ ವರದಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ADVERTISEMENT

ಸೂರಜ್ ರೇವಣ್ಣ ಬ್ರಿಗೇಡ್ ಖಜಾಂಚಿ ನೀಡಿದ ದೂರಿನ ಆಧಾರದಡಿ ಸೂರಜ್ ರೇವಣ್ಣ ವಿರುದ್ಧ 2024ರ ಜೂನ್‌ 22ರಂದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ‘ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಿಲ್ಲ’ ಎಂಬ ಕಾರಣ ನೀಡಿ ಅಂತಿಮ ವರದಿ ಸಲ್ಲಿಸಿದ್ದಾರೆ.

ಮತ್ತೊಂದು ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.