ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತದೆ ಎನ್ನುವ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತಮ್ಮ ರಾಜಕೀಯ ಹತಾಶ ಸ್ಥಿತಿಯನ್ನು ಪ್ರದರ್ಶಿಸಿದ್ದಾರೆ’ ಎಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ ಟೀಕಿಸಿದ್ದಾರೆ.
ದೇವೇಗೌಡರ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸುನಾಮಿಯಿಂದ ದೇವೇಗೌಡರು ಹೆದರಿದ್ದಾರೆ. ಈ ಕಾರಣದಿಂದ ಬಿಜೆಪಿಯಲ್ಲಿ ವಿಲೀನವಾಗಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಯಿಂದ ತಮಗೆ ಆನೆ ಬಲ ಬಂದಿದೆ ಎಂಬ ಭ್ರಮೆಯಲ್ಲಿ ದೃತರಾಷ್ಟ್ರನ ಅಂಧ ಪ್ರೇಮವನ್ನು ವ್ಯಕ್ತಪಡಿಸುತ್ತಿದ್ದಾರೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.