ADVERTISEMENT

ಸ್ಯಾಂಕಿ ಕೆರೆಗೆ ಬಾಗಿನ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 2:53 IST
Last Updated 16 ಅಕ್ಟೋಬರ್ 2021, 2:53 IST
ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಸ್ಯಾಂಕಿ ಕೆರೆಗೆ ಬಾಗಿನ ಸಮರ್ಪಿಸಿದರು. ಮಲ್ಲೇಶ್ವರ ನಾಗರಿಕರು ಹಾಗೂ ಇತರರು ಇದ್ದರು.
ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಸ್ಯಾಂಕಿ ಕೆರೆಗೆ ಬಾಗಿನ ಸಮರ್ಪಿಸಿದರು. ಮಲ್ಲೇಶ್ವರ ನಾಗರಿಕರು ಹಾಗೂ ಇತರರು ಇದ್ದರು.   

ಬೆಂಗಳೂರು: ಮಳೆಯಿಂದ ಸಂಪೂರ್ಣವಾಗಿಭರ್ತಿಯಾಗಿರುವ ಮಲ್ಲೇಶ್ವರದ ಸ್ಯಾಂಕಿ ಕೆರೆಗೆ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದಸಿ.ಎನ್.ಅಶ್ವತ್ಥನಾರಾಯಣ,‘ಸ್ಯಾಂಕಿ ಕೆರೆಗೆ ಮೊದಲು ಕೊಳಚೆ ನೀರು ಸೇರುತ್ತಿತ್ತು. ಈಗ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಿ, ಶುದ್ಧವಾದ ನೀರು ಮಾತ್ರ ಕೆರೆಯ ಒಡಲು ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಕೆರೆಯ ಸುತ್ತಮುತ್ತಲ ಹಲವು ರಸ್ತೆಗಳಲ್ಲಿನ ಕಾಲುವೆಗಳು ಮುಚ್ಚಿಹೋಗಿದ್ದರಿಂದಇತ್ತೀಚಿನ ವರ್ಷಗಳಲ್ಲಿ ಸ್ಯಾಂಕಿ ಕೆರೆಗೆ ನೀರು ಬರುವುದು ಕಡಿಮೆಯಾಗಿತ್ತು.ಇಲ್ಲಿನ ನೀರೆಲ್ಲ ವೃಷಭಾವತಿ ಕಣಿವೆಯ ಕಡೆಗೆ ಹರಿದು ಹೋಗುತ್ತಿತ್ತು. ಈಗ ಕೆರೆಗೆ ನೀರು ಬರುವಂತೆ ಮಾಡಲಾಗಿದೆ. ಸದಾಶಿವನಗರ ಬಡಾವಣೆಯ ಕಡೆಯಿಂದ ಬರುವ ಮಳೆನೀರು ಕೂಡ ಅಗತ್ಯ ಪ್ರಮಾಣದಲ್ಲಿ ಕೆರೆಯಂಗಳ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.