ADVERTISEMENT

ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗಿದ ಕಂದಮ್ಮಗಳು

ವೈದ್ಯರ ನಡೆಗೆ ಸಚಿವ ಸುಧಾಕರ್ ಅಸಮಾಧಾನ* ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ಮೇಲ್ದರ್ಜಗೆ ಅನುದಾನ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 20:00 IST
Last Updated 14 ಫೆಬ್ರುವರಿ 2020, 20:00 IST
ಕೆ.ಸುಧಾಕರ್
ಕೆ.ಸುಧಾಕರ್   

ಬೆಂಗಳೂರು:ಕೆಲ ತಾಯಂದಿರು ಹಾಸಿಗೆಯಿಲ್ಲದ ಕಾರಣ ಮಕ್ಕಳನ್ನು ನೆಲೆದ ಮೇಲೆಯೇ ಮಲಗಿಸಿರುವ ದೃಶ್ಯ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದಾಗ ಕಂಡು ಬಂದಿತು.

ಆಸ್ಪತ್ರೆಯ ವೈದ್ಯಾಧಿಕಾರಿಗಳ ನಡೆಯ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಅಗತ್ಯ ವ್ಯವಸ್ಥೆ ಮಾಡಲು ಸೂಚಿಸಿದರು.ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸುಧಾಕರ್, ‘ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ₹ 135 ಕೋಟಿ ವೆಚ್ಚದಲ್ಲಿ 500 ಹಾಸಿಗೆ ಸೌಕರ್ಯ ಸೇರ್ಪಡೆ ಮಾಡುವ ಮೂಲಕ ಮೇಲ್ದರ್ಜೆಗೆ ಏರಿಸಲಾಗುವುದು’ ಎಂದು ಭರವಸೆ ನೀಡಿದರು.

‘ಈ ಆಸ್ಪತ್ರೆಯು 500 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. ಶೇ 30 ರಷ್ಟು ವೈದ್ಯರ ಕೊರತೆಯಿದೆ. ಆದಷ್ಟು ಬೇಗ ಸಿಬ್ಬಂದಿ ಹಾಗೂ ವೈದ್ಯರನ್ನು ನೇಮಕ ಮಾಡಲಾಗುವುದು’ ಎಂದರು.

ADVERTISEMENT

‘ತುರ್ತು ನಿಗಾ ಘಟಕದ ಹಾಸಿಗೆ ಸಂಖ್ಯೆಯನ್ನು ಹೆಚ್ಚಿಸಬೇಕಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳು ಕುಳಿತು
ಕೊಳ್ಳಲು ಇನ್ನಷ್ಟು ಆಸನದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.