ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು
ಬೆಂಗಳೂರು: ‘ಸುಮಾರು ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಾಬು ಜಗಜೀವನರಾಂ ಭವನದ ಉದ್ಘಾಟನೆ ಜುಲೈ 13ರಂದು ನಡೆಯಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
‘ಹಿಂದೆ ನಮ್ಮ ಸರ್ಕಾರವಿದ್ದಾಗ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ ಅಭಿವೃದ್ಧಿ ತರಬೇತಿಯನ್ನು ಭವನದಲ್ಲಿ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.