
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ನಮ್ಮ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟ ಆರು ವರ್ಷದ ಬಾಲಕಿಯನ್ನು ಮೆಟ್ರೊ ಸಿಬ್ಬಂದಿ ಸುರಕ್ಷಿತವಾಗಿ ತಾಯಿಯ ಕೈಗೆ ಒಪ್ಪಿಸಿದ್ದಾರೆ.
ಶನಿವಾರ ಮಧ್ಯಾಹ್ನ 2.30ರ ಹೊತ್ತಿಗೆ ಬಾಲಕಿಯೊಂದಿಗೆ ತಾಯಿ ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದಿದ್ದರು. ಆದರೆ, ಮಗು ನಿಲ್ದಾಣದಲ್ಲಿಯೇ ಇತ್ತು, ತಾಯಿ ಮೆಟ್ರೊ ರೈಲಲ್ಲಿ ಮುಂದಕ್ಕೆ ಚಲಿಸಿದ್ದರು. ಪ್ರಯಾಣಿಕರೊಬ್ಬರು ಬಾಲಕಿಯನ್ನು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಮೆಜೆಸ್ಟಿಕ್‌ನಿಂದ ಎಲ್ಲ ನಿಲ್ದಾಣಗಳ ನಿಯಂತ್ರಕರಿಗೆ ಮಾಹಿತಿ ರವಾನಿಸಲಾಯಿತು.
ಆ ನಂತರ ಮೆಜೆಸ್ಟಿಕ್ ನಿಲ್ದಾಣಕ್ಕೆ ವಾಪಸ್ ಬಂದ ತಾಯಿಗೆ ಮಗುವನ್ನು ಹಸ್ತಾಂತರಿಸಲಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.