ADVERTISEMENT

ಬೆನ್ನು ನೋವು | ದರ್ಶನ್‌ಗೆ ಫಿಸಿಯೋಥೆರಪಿ: ವೈದ್ಯರ ಸಲಹೆ

ಚಿಕಿತ್ಸೆ ಕೊಡಿಸಿ: ಜೈಲು ಅಧಿಕಾರಿಗಳಿಗೆ ಪತ್ರ ಬರೆದ ನಟ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 0:23 IST
Last Updated 16 ಅಕ್ಟೋಬರ್ 2025, 0:23 IST
ದರ್ಶನ್
ದರ್ಶನ್   

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಅನಾರೋಗ್ಯದ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಮತ್ತೆ ಪತ್ರ ಬರೆದು, ಚಿಕಿತ್ಸೆಗೆ ಮನವಿ ಮಾಡಿದ್ದಾರೆ.

ದರ್ಶನ್ ಅವರು ಈ ಹಿಂದೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹೇಳಿ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ನಂತರ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲೇ ಹೆಚ್ಚಿನ ಸಮಯ ಕಳೆದಿದ್ದ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ. ಈ ಮಧ್ಯೆ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಪಡಿಸಿದ್ದರಿಂದ ಮತ್ತೆ ಜೈಲು ಸೇರಿದ್ದರು.

‘ತಮಗೆ ಒಂದು ವಾರದಿಂದ ಬೆನ್ನು ನೋವು ಹೆಚ್ಚಾಗಿದೆ. ಹೀಗಾಗಿ, ಕುಂಟುತ್ತಲೇ ನಡೆಯುವಂತಾಗಿದೆ. ಬೆನ್ನು ನೋವಿನ ಸಮಸ್ಯೆಗೆ ಹೆಚ್ಚಿನ ಚಿಕಿತ್ಸೆ ಬೇಕು’ ಎಂದು ಜೈಲಿನ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅವರ ಮನವಿ ಮೇರೆಗೆ ಅಧಿಕಾರಿಗಳು, ಖಾಸಗಿ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ದರ್ಶನ್ ಅವರಿಗೆ ಫಿಸಿಯೋ ಥೆರಪಿಯ ಅವಶ್ಯಕತೆ ಇದೆ ಎಂದು ವೈದ್ಯರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ದರ್ಶನ್‍ಗೆ ಜೈಲಿನಲ್ಲೇ ವಾರದಲ್ಲಿ ಎರಡು ಬಾರಿ ಫಿಸಿಯೋಥೆರಪಿ ಮಾಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ADVERTISEMENT

ಜೈಲಿನಲ್ಲಿ ಪರಿಶೀಲನೆ: ಈ ಮಧ್ಯೆ ಕೋರ್ಟ್‍ನ ಸೂಚನೆಯಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ. ವರದರಾಜು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಖುದ್ದು ಭೇಟಿ ನೀಡಿ, ಜೈಲಿನಲ್ಲಿ ದರ್ಶನ್ ಅವರಿಗೆ ಕಲ್ಪಿಸಿರುವ ಮೂಲಸೌಕರ್ಯಗಳ ಬಗ್ಗೆ ಮಂಗಳವಾರ ಪರಿಶೀಲನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.