
ವಿಧಾನ ಸೌಧ
(ಸಾಂಕೇತಿಕ ಚಿತ್ರ)
ಬೆಂಗಳೂರು: ‘ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಫೆಬ್ರುವರಿ 10ರ ಒಳಗೆ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಬುಧವಾರ ಇಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರ ನೇತೃತ್ವದಲ್ಲಿ ಈಗಾಗಲೇ ಅಂಕಿ ಅಂಶಗಳ ಕ್ರೋಡೀಕರಣ ನಡೆಯುತ್ತಿದೆ. ಜನವರಿ ಅಂತ್ಯದೊಳಗೆ ಅಂತಿಮಗೊಳಿಸಿ ಫೆಬ್ರುವರಿಯಲ್ಲಿ ವರದಿ ಸಲ್ಲಿಸಬಹುದು ಎಂದರು.
‘ತಮ್ಮ ಸಮುದಾಯದ ಜನಸಂಖ್ಯೆಯನ್ನು ಅಂದಾಜು ರೀತಿಯಲ್ಲಿ ಕೆಲವರು ಹೇಳುತ್ತಾರೆ. ಆದರೆ, ಒಮ್ಮೆ ವರದಿ ಬಿಡುಗಡೆಯಾದರೆ ಪ್ರತಿಯೊಂದು ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ನಿಖರ ಮಾಹಿತಿ ಸಿಗಲಿದೆ. ಈ ವರದಿಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸಲು ಸಾಧ್ಯವಾಗಲಿದೆ’ ಎಂದು ತಂಗಡಿ ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.