ADVERTISEMENT

ಬ್ಯಾಡರಹಳ್ಳಿ ಪ್ರಕರಣ| ಮಗು ಕೊಂದ ತಾಯಿ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 18:51 IST
Last Updated 30 ಸೆಪ್ಟೆಂಬರ್ 2021, 18:51 IST

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ಪ್ರಕರಣದಲ್ಲಿ ಮೃತ ಸಿಂಧುರಾಣಿ ಹಾಗೂ ಇತರರ ವಿರುದ್ಧ ಕೊಲೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

ತಿಗಳರಪಾಳ್ಯದಲ್ಲಿ ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿಂಧೂರಾಣಿ ಅವರ ಒಂಬತ್ತು ತಿಂಗಳ ಮಗು ಸಹ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

‘ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವರದಿಯಿಂದ ಗೊತ್ತಾಗಿದೆ. ಆತ್ಮಹತ್ಯೆಗೂ ಮುನ್ನ ತಾಯಿ ಸಿಂಧುರಾಣಿ ಹಾಗೂ ಇತರರು, ಮಗುವನ್ನು ಕೊಂದಿರುವುದಕ್ಕೆ ಪುರಾವೆಗಳು ಸಿಕ್ಕಿವೆ. ಹೀಗಾಗಿ, ಸಿಂಧುರಾಣಿ ಹಾಗೂ ಇತರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.