ADVERTISEMENT

ಬಿಕ್ಲು ಶಿವು ಕೊಲೆ: ಕೊನೆಗೂ ಪೊಲೀಸರ ವಶವಾದ ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 13:47 IST
Last Updated 12 ಫೆಬ್ರುವರಿ 2026, 13:47 IST
<div class="paragraphs"><p>ಬೈರತಿ ಬಸವರಾಜ</p></div>

ಬೈರತಿ ಬಸವರಾಜ

   

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದ ಐದನೇ ಆರೋಪಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡರು.

ಸಿಐಡಿ ಕಚೇರಿಗೆ ಅವರನ್ನು ಕರೆತಂದು ಬಂಧನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ADVERTISEMENT

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯೂ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ ಅವರ ಬಂಧನಕ್ಕೆ ಶೋಧ ಕಾರ್ಯ ತೀವ್ರಗೊಳಿಸಲಾಗಿತ್ತು.

ಗುಜರಾತ್‌ನಿಂದ ವಿಮಾನದ ಮೂಲಕ ನಗರಕ್ಕೆ ಬರುತ್ತಿರುವ ಮಾಹಿತಿ ತಿಳಿದು ವಿಮಾನ ನಿಲ್ದಾಣದ ಬಳಿ ಸಿಐಡಿ ಪೊಲೀಸರು ಕಾದಿದ್ದರು. ಟರ್ಮಿನಲ್‌ 1ರಲ್ಲಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.