ನಮ್ಮ ಮೆಟ್ರೊ
ಬೆಂಗಳೂರು: ಕ್ಯೂಆರ್ ಆಧಾರಿತ ಟಿಕೆಟ್‌ಗಳನ್ನು ತ್ವರಿತವಾಗಿ ಮತ್ತು ಸಂಪರ್ಕರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಹತ್ತು ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಲಾಗಿದೆ.
ಏಕ ಪ್ರಯಾಣ ಟೋಕನ್‌ಗಳನ್ನು ಕ್ರಮೇಣ ಬದಲಾಯಿಸಲು ಈ ಯಂತ್ರಗಳನ್ನು ಅಳವಡಿಸಲಾಗಿದೆ. ಪ್ರಯಾಣಿಕರು 30 ಸೆಕೆಂಡ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದು.
ಹೀಗೆ ಮಾಡಿ:
ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ತಲುಪಬೇಕಾದ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನಮೂದಿಸಿ, ಪ್ರಯಾಣದರ ಪರಿಶೀಲಿಸಬೇಕು. ಯಾವುದೇ ಯುಪಿಐ ಆಧಾರಿತ ಮೊಬೈಲ್ ಆ್ಯಪ್‌ಗಳ ಮೂಲಕ ದರ ಪಾವತಿ ಮಾಡಬಹುದು. ಪಾವತಿ ಪೂರ್ಣಗೊಂಡ ಕೂಡಲೇ ಪೇಪರ್ ಕ್ಯೂಆರ್ ಟಿಕೆಟ್ ಪ್ರಕಟವಾಗುತ್ತದೆ.
ಈ ಕ್ಯೂಆರ್ ಟಿಕೆಟ್‌ಗಳನ್ನು ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಬಳಸಬೇಕು. ಪ್ರಯಾಣ ಮುಗಿಸಿದ ನಂತರ, ಟಿಕೆಟ್‌ಗಳನ್ನು ನಿಗದಿತ ಕಸದ ತೊಟ್ಟಿಗಳಲ್ಲಿ ಹಾಕಬೇಕು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.