ಕೆ.ಆರ್.ಪುರ: ಮತ್ತೊಬ್ಬ ರಾವಣ ಹುಟ್ಟಿ ಬಂದರು ಬಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
ಮಹದೇವಪುರ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.
ಬಜರಂಗದಳ ನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅಪಾರ ಸಂಖ್ಯೆಯ ಹನುಮಂತ ಭಕ್ತರನ್ನು ಒಳಗೊಂಡಿರುವ ಬಜರಂಗದಳದವರನ್ನು ಕೆರಳಿಸಿದೆ ಎಂದು ಹೇಳಿದರು.
ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರವು ₹ 100 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕಾಂಗ್ರೆಸ್ ಹನುಮ ಭಕ್ತರನ್ನು ಭಯೋತ್ಪಾದಕರಂತೆ ಕಾಣುತ್ತಿರುವುದು ವಿಪರ್ಯಾಸ ಎಂದರು ಹೇಳದರು.
ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ, ಅರವಿಂದ ಲಿಂಬಾವಳಿ ಅವರ ಹಾದಿಯಲ್ಲೆ ಕ್ಷೇತ್ರದ ಅಭಿವೃದ್ದಿ ಮುಂದುವರೆಯಲು ಬಿಜೆಪಿಗೆ ಮತ ನೀಡಿ, ನಿಮ್ಮ ಅಭಿಮಾನ ಉಳಿಸಿಕೊಳ್ಳುತ್ತೇವೆ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.