ADVERTISEMENT

40 ಮೊಬೈಲ್ 4 ದ್ವಿಚಕ್ರ ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 23:10 IST
Last Updated 13 ನವೆಂಬರ್ 2020, 23:10 IST
ಜಪ್ತಿ ಮಾಡಿದ ಮೊಬೈಲ್, ದ್ವಿಚಕ್ರ ವಾಹನ ಜೊತೆ ಆರೋಪಿಗಳು ಹಾಗೂ ಅವರನ್ನು ಬಂಧಿಸಿದ ಬಾಣಸವಾಡಿ ಪೊಲೀಸರ ತಂಡ
ಜಪ್ತಿ ಮಾಡಿದ ಮೊಬೈಲ್, ದ್ವಿಚಕ್ರ ವಾಹನ ಜೊತೆ ಆರೋಪಿಗಳು ಹಾಗೂ ಅವರನ್ನು ಬಂಧಿಸಿದ ಬಾಣಸವಾಡಿ ಪೊಲೀಸರ ತಂಡ   

ಬೆಂಗಳೂರು: ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದ ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಕೆ.ನಾರಾಯಣಪುರದ ವಿಷ್ಣು (22), ಶಿವಕುಮಾರ್ (21) ಹಾಗೂ ಸಂತಮಿಲ್ (22) ಬಂಧಿತರು. ಅವರಿಂದ ₹ 2.5 ಲಕ್ಷ ಮೌಲ್ಯದ 40 ಮೊಬೈಲ್‌ಗಳು ಹಾಗೂ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ. ಶರಣಪ್ಪ ತಿಳಿಸಿದರು.

‘ಚಾಕು ಇಟ್ಟುಕೊಂಡು ದ್ವಿಚಕ್ರ ವಾಹನದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ರಾತ್ರಿ ವೇಳೆಯಲ್ಲಿ ದಾರಿಹೋಕರನ್ನು ಅಡ್ಡಗಟ್ಟಿ
ಕೃತ್ಯ ಎಸಗುತ್ತಿದ್ದರು. ಇತ್ತೀಚೆಗಷ್ಟೇ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ತನಿಖೆ ಕೈಗೊಂಡಿದ್ದ ಪೊಲೀಸರು,
ಸುಳಿವು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದೂ ಹೇಳಿದರು.

ADVERTISEMENT

‘ಬಂಧಿತ ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 2, ರಾಮಮೂರ್ತಿನಗರ ಹಾಗೂ ಮಹದೇವಪುರದಲ್ಲಿ ನಡೆದಿದ್ದ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ’ ಎಂದೂ ಶರಣಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.