ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪು ಮತ್ತು ಶಾಸಕ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತ್ಯೇಕ ಬಂದ್‌ಗಳಿಂದ ರಾಜ್ಯದಲ್ಲಿ ಉಂಟಾಗಿರುವ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಪ್ರಮಾಣ ಅಂದಾಜಿಸಲು ಇಬ್ಬರು ನಿವೃತ್ತ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಿಸಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ರಾಜಾಜಿನಗರದ ‘ಶ್ರದ್ಧಾ ಪೋಷಕರ ಸಂಘ’ ಹಾಗೂ ಕನಕಪುರದ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.