
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ನಾಲ್ವರು ಆರೋಪಿಗಳನ್ನು ಕೆ.ಆರ್. ಪುರ ಠಾಣೆಯ ಪೊಲೀಸರು ಬಂಧಿಸಿ, ₹ 50 ಲಕ್ಷ ಮೌಲ್ಯದ 60 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ತಮಿಳುನಾಡಿನ ವೇಲೂರು ಜಿಲ್ಲೆಯ ರಂಜಿತ್‌ಕುಮಾರ್ (28), ಮುತ್ತುನಗರದ ಯುವರಾಜ್ (22), ಒಡೆಯರ ರಾಜ್ಯಪಾಳ್ಯಂದ ವಿನೋದ್‌ಕುಮಾರ್ (18) ಹಾಗೂ ಶಂಕರಪುರದ ಸಿ.ಮಣಿಕಂಠ (20) ಬಂಧಿತರು.
ಅಯ್ಯಪ್ಪನಗರದ ಆಕಾಶ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.