ಬೆಂಗಳೂರು: ನಗರದ ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ₹55 ಲಕ್ಷ ಮೌಲ್ಯದ ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ವರ್ತೂರು, ಕಾಡಗೋಡಿ, ಕೆ.ಆರ್.ಪುರ, ಜೆ.ಬಿ. ನಗರ, ಚಿಕ್ಕಪೇಟೆ, ಸುದ್ದಗುಂಟೆ ಪಾಳ್ಯ, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡುತ್ತಿದ್ದ ಆನೇಕಲ್ ತಾಲ್ಲೂಕಿನ ದೊಮ್ಮಸಂದ್ರದ ನಿವಾಸಿ ದಿಲೀಪ್ ಕುಮಾರ್ ಹಾಗೂ ಚಿನ್ನಪ್ಪನಹಳ್ಳಿ ನಿವಾಸಿ ರಿಯನ್ ಎಂಬುವರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅತ್ತಿಬೆಲೆ ನಿವಾಸಿ ಸಂತೋಷ್ ರೆಡ್ಡಿ ತಲೆಮರೆಸಿಕೊಂಡಿದ್ದು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಬಂಧಿತರಿಂದ ₹15 ಲಕ್ಷ ಮೌಲ್ಯದ 24 ಬೈಕ್, 8 ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ.
ವೈಟ್‌ಪೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ₹18 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 15 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಮಾರತ್‌ಹಳ್ಳಿ ಠಾಣೆ ಪೊಲೀಸರು, ₹22 ಲಕ್ಷದ 12 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.