
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರದ ಸೋನುಕುಮಾರ್ (26) ಮೃತ ಯುವಕ. ನಗರದ ಕಾರ್ಖಾನೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದು, ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ರಾತ್ರಿ 9 ಗಂಟೆ ಸಮಯದಲ್ಲಿ ಕಾರ್ಖಾನೆಯಿಂದ ಕೆಲಸ ಮುಗಿಸಿ ಮನೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾಚನಾಯಕನಹಳ್ಳಿ ಬಳಿ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟರು.
ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.