
ಪ್ರಜಾವಾಣಿ ವಾರ್ತೆ
ಬಿಬಿಎಂಪಿ
ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ನ.25ರಂದು ಸಂಜೆ 6ರಿಂದ 7ರವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಸಾರ್ವಜನಿಕರ ಕರೆಗಳಿಗೆ ಉತ್ತರಿಸಲಿದ್ದಾರೆ. ರಸ್ತೆ ಗುಂಡಿ, ರಸ್ತೆ ದುರಸ್ತಿ, ಬೀದಿ ದೀಪಗಳ ನಿರ್ವಹಣೆ, ಕಸ ವಿಲೇವಾರಿ, ಉದ್ಯಾನ ನಿರ್ವಹಣೆ, ಇ–ಖಾತಾ ವಿಷಯಗಳು, ಒತ್ತುವರಿ, ಚರಂಡಿ ಶುದ್ಧೀಕರಣ ಸಹಿತ ವಿವಿಧ ವಿಚಾರಗಳ ಬಗ್ಗೆ ಅಹವಾಲು ಸಲ್ಲಿಸಬಹುದು.
ಕರೆ ಮಾಡಬೇಕಾದ ಸಂಖ್ಯೆ: 080-22975803.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.