ADVERTISEMENT

8ಕ್ಕೆ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ‘ಬೆಂಗಳೂರು ಚಲೋ’

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 16:21 IST
Last Updated 2 ಫೆಬ್ರುವರಿ 2024, 16:21 IST

ಬೆಂಗಳೂರು: ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರ ಆಗಿದ್ದರೂ ಆಡಳಿತದಲ್ಲಿ, ನಿರ್ಣಯಗಳಲ್ಲಿ ಮೇಲಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟವು ಫೆ.8ರಂದು ‘ಬೆಂಗಳೂರು ಚಲೊ’ ಹಮ್ಮಿಕೊಂಡಿದೆ.

‘ಸ್ವತಂತ್ರ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಗ್ರಾಮ ಪಂಚಾಯಿತಿಗಳು ಸ್ವಾತಂತ್ರ್ಯ ಕಳೆದುಕೊಂಡಿವೆ.  ಗಾಂಧೀಜಿಯ ಗ್ರಾಮ ಸ್ವರಾಜ್ಯ ಮತ್ತು ಅಂಬೇಡ್ಕರ್‌ ಅವರ ಸಾಮಾಜಿಕ ನ್ಯಾಯದ ಉಳಿವಿಗಾಗಿ ‘ಬೆಂಗಳೂರು ಚಲೊ’ ಹಮ್ಮಿಕೊಳ್ಳಲಾಗಿದೆ. ಫೆ.8ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್‌ ನೇತೃತ್ವದಲ್ಲಿ ಹೋರಾಟ ನಡೆಯಲಿದೆ’ ಎಂದು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

‘ಗ್ರಾಮ ಪಂಚಾಯಿತಿಗಳಿಗೆ ಜವಾಬ್ದಾರಿ ನಿಗದಿ ಮಾಡಬೇಕು. ಬಾಪೂಜಿ ಸೇವಾ ಕೇಂದ್ರಗಳ ಬಲವರ್ಧನೆ ಮಾಡಬೇಕು. ಪಂಚಾಯಿತಿ ಸದಸ್ಯರನ್ನು ರಾಜ್ಯ ಶಿಷ್ಟಾಚಾರಕ್ಕೆ ಒಳಪಡಿಸಬೇಕು ಎಂಬುದು ಸೇರಿ 28 ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.