ADVERTISEMENT

ಬೆಂಗಳೂರಿನಲ್ಲಿ ಒಂದೂವರೆ ಲಕ್ಷ ಸೋಂಕಿತರು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 19:41 IST
Last Updated 7 ಸೆಪ್ಟೆಂಬರ್ 2020, 19:41 IST
   

ಬೆಂಗಳೂರು: ನಗರದಲ್ಲಿ ಸೋಮವಾರ 2,942 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಂಖ್ಯೆ 1,50,523ಕ್ಕೆ ಏರಿದೆ.

ಹೊಸದಾಗಿ 2,935 ಕೋವಿಡ್-19 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.ಈ ಮೂಲಕ ಸೋಂಕಿನಿಂದ ಗುಣಮುಖರಾದ ಒಟ್ಟು ಸಂಖ್ಯೆ 1,08,642ಕ್ಕೆ ಏರಿದೆ. ಅಂದರೆ, ಚೇತರಿಕೆಯ ಪ್ರಮಾಣ ಶೆ 71.62ರಷ್ಟಿದೆ.

ಸೋಮವಾರಸೋಂಕಿನಿಂದ 33 ಪುರುಷರು ಮತ್ತು 15 ಮಹಿಳೆಯರು ಸೇರಿದಂತೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಶೇ.1.47 ರಷ್ಟಿದೆ.

ADVERTISEMENT

ಸಕ್ರಿಯ ಪ್ರಕರಣಗಳ ಪೈಕಿ,39,669 ಸೋಂಕಿತರು ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳು ಮತ್ತು ಮನೆಯಲ್ಲಿ ಚಿಕಿತ್ಸೆ ಹಾಗೂ ಆರೈಕೆಯಲ್ಲಿದ್ದಾರೆ. 265 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 22,713 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಈವರೆಗೆ 10,60,813 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.