ADVERTISEMENT

ರೌಡಿಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ತಂಡ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 19:38 IST
Last Updated 23 ಜುಲೈ 2021, 19:38 IST

ಬೆಂಗಳೂರು: ಬ್ಯಾಂಕ್‌ನಲ್ಲಿ ರೌಡಿ ಕೊಲೆ, ವಿಜಯನಗರದಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ಸೇರಿದಂತೆ ನಗರದಲ್ಲಿ ನಡೆದ ಅಪರಾಧ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕಮಿಷನರ್ ಕಮಲ್ ಪಂತ್, ರೌಡಿಗಳ ಚಟುವಟಿಕೆ ಮಟ್ಟಹಾಕಲು ಇನ್‌ಸ್ಪೆಕ್ಟರ್‌ಗಳಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ.

‘ಪ್ರತಿಯೊಂದು ಠಾಣೆ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅದಕ್ಕಾಗಿ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಇಬ್ಬರು ಪಿಎಸ್‌ಐ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಬೇಕು. ಸರದಿ ಪ್ರಕಾರ ತಂಡ ಕೆಲಸ ಮಾಡಬೇಕು’ ಎಂದು ಕಮಿಷನರ್ ಹೇಳಿರುವುದಾಗಿ ಗೊತ್ತಾಗಿದೆ.

‘ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಗಳ ವಿಳಾಸ, ಅವರ ಚಲನವಲನ, ನಿತ್ಯದ ಕೆಲಸ, ಪ್ರವಾಸ... ಹೀಗೆ ಪ್ರತಿಯೊಂದು ಮಾಹಿತಿಯನ್ನು ಪ್ರತ್ಯೇಕ ತಂಡ ಕಲೆಹಾಕಬೇಕು. ರೌಡಿಗಳು ಮಾಡುವ ಪ್ರತಿಯೊಂದು ಕೆಲಸದ ವಿವರವನ್ನು ಸಂಗ್ರಹಿಸಬೇಕು. ಯಾವುದಾದರೂ ಆಸ್ತಿ ವ್ಯಾಜ್ಯಗಳಲ್ಲಿ ರೌಡಿಗಳು ಮಧ್ಯಪ್ರವೇಶಿಸಿದರೆ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅನುಮಾನಾಸ್ಪದ ಚಟುವಟಿಕೆಗಳ ಕಂಡುಬಂದರೆ ರೌಡಿಗಳ ಮನೆಗಳ ಮೇಲೂ ದಾಳಿ ಮಾಡಬೇಕು’ ಎಂದೂ ತಿಳಿಸಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.