ADVERTISEMENT

ಬೆಂಗಳೂರು ನಗರ ವಿವಿ ಘಟಿಕೋತ್ಸವ ಜುಲೈ 10ಕ್ಕೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2023, 14:25 IST
Last Updated 16 ಜೂನ್ 2023, 14:25 IST
ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ   

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಎರಡನೇ ವಾರ್ಷಿಕ ಘಟಿಕೋತ್ಸವವು ಜುಲೈ 10ರಂದು ಬೆಳಿಗ್ಗೆ 11ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಘಟಿಕೋತ್ಸವದ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ, ಭಾಗವಹಿಸುವರು. ಕುಲಪತಿ ಪ್ರೊ. ಲಿಂಗರಾಜ ಗಾಂಧಿ ವರದಿ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT