ADVERTISEMENT

ಜೂ.11ರಂದು ಬೆಂಗಳೂರು ನಗರ ವಿ.ವಿ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:20 IST
Last Updated 8 ಜೂನ್ 2025, 16:20 IST
   

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ ಜೂನ್‌ 11ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್‌ ವಹಿಸಲಿದ್ದಾರೆ. ಬಿಹಾರ ಹೈಕೋರ್ಟ್‌ನ  ನ್ಯಾಯಮೂರ್ತಿ ಪಿ.ಬಿ ಭಜಂತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲ್ಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್,  ಪ್ರಭಾರ ಕುಲಪತಿ ಪ್ರೊ ಕೆ.ಆರ್. ಜಲಜಾ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT