ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಮಂಗಳವಾರ ರಾತ್ರಿ (ಆ. 11) ನಡೆದ ಗಲಭೆ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಶನಿವಾರ ಮೃತಪಟ್ಟಿದ್ದು, ಈ ಮೂಲಕ ಗುಂಡೇಟಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಮೃತಪಟ್ಟವನನ್ನು ಡಿ.ಜೆ.ಹಳ್ಳಿ ನಿವಾಸಿ ಸೈಯದ್ ನದೀಂ (22) ಎಂದು ಗುರುತಿಸಲಾಗಿದೆ. ಗಲಭೆ ನಡೆದ ಸ್ಥಳದಲ್ಲಿದ್ದ ಆತನಿಗೆ ಪೊಲೀಸರ ಗುಂಡು ತಗುಲಿತ್ತು.
ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.