FIR
– ಕಡತ ಚಿತ್ರ
ಬೆಂಗಳೂರು: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ, ಬೆದರಿಸಿ ವಂಚನೆ ಮಾಡುತ್ತಿದ್ದ ಆರೋಪದಡಿ ಸಿಬಿಟ್ಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಎಚ್‌ಎಸ್‌ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್‌ಎಸ್‌ಆರ್ ಲೇಔಟ್ ಠಾಣೆ ಇನ್‌ಸ್ಪೆಕ್ಟರ್ ಹರೀಶ್ ಕುಮಾರ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
‘ಎಚ್‌ಎಸ್‌ಆರ್ ಲೇಔಟ್‌ನ 27ನೇ ಮುಖ್ಯರಸ್ತೆಯಲ್ಲಿ ನಕಲಿ ಬಿಪಿಒ ಕಂಪನಿ ತೆರೆಯಲಾಗಿದ್ದು, ಇದರಲ್ಲಿ ಸುಮಾರು 20 ಮಂದಿ ಯುವಜನರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಆನ್‌ಲೈನ್‌ನಲ್ಲಿ ವಂಚನೆ ಮಾಡುವ ತರಬೇತಿ ನೀಡಲಾಗುತ್ತಿತ್ತು. ಅಪರಿಚಿತ ವ್ಯಕ್ತಿಗಳನ್ನು ಆನ್‌ಲೈನ್ ಮೂಲಕ ಸಂಪರ್ಕಿಸಿ, ಹಣ ಅಕ್ರಮ ವರ್ಗಾವಣೆ ಹಾಗೂ ಮಾದಕ ವಸ್ತುಗಳ ಕಾಯ್ದೆ ಅಡಿ ಅಪರಾಧ ಮಾಡಿದ್ದೀರಿ ಎಂಬುದಾಗಿ ಹೆದರಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಳಿಕ ಸಹಾಯ ಮಾಡುವ ನೆಪದಲ್ಲಿ ವಂಚಕರು, ಅಪರಿಚಿತ ವ್ಯಕ್ತಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಬಾತ್ಮೀದಾರರ ಮಾಹಿತಿ ಆಧರಿಸಿ ಕಂಪನಿ ಮೇಲೆ ದಾಳಿ ನಡೆಸಲಾಯಿತು. ಕಂಪನಿಯ ಅಕ್ಕಪಕ್ಕದವರನ್ನು ವಿಚಾರಿಸಿದಾಗ, ಕಂಪ್ಯೂಟರ್ ಉಪಕರಣಗಳ ಮೂಲಕ ಸೈಬರ್ ವಂಚನೆ ಮಾಡುತ್ತಿರುವುದರ ಬಗ್ಗೆ ಮಾಹಿತಿ ನೀಡಿದರು. ರಾತ್ರಿ ವೇಳೆ ಸಾರ್ವಜನಿಕರಿಗೆ ಕರೆ ಮಾಡಿ ಕೃತ್ಯವೆಸಗುತ್ತಿರುವುದು ತನಿಖೆ ವೇಳೆ ಗೊತ್ತಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.