ಬೆಂಗಳೂರು: ವಿಜಯನಗರ ಠಾಣೆ ವ್ಯಾಪ್ತಿಯ ಹಂಪಿನಗರದಲ್ಲಿರುವ ಮನೆಯೊಂದರಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ದಂಪತಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಕಾರಣ ಗೊತ್ತಾಗಿಲ್ಲ. ವಿಜಯನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ.
ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟಿವೆ. ಗೋಡೆಗೂ ಹಾನಿ ಆಗಿದೆ.
ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಅಕ್ಕ-ಪಕ್ಕದ ಕಟ್ಟಡಗಳಿಗೂ ಹಾನಿ ಆಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಪೋಟಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.