ADVERTISEMENT

ಬೆಂಗಳೂರು | 891 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 24 ಮೇ 2023, 6:43 IST
Last Updated 24 ಮೇ 2023, 6:43 IST
ಆಚಾರ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸೋಮವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ವಿಟಿಯು ಉಪಕುಲಪತಿ ಎಸ್‌. ವಿದ್ಯಾಶಂಕರ್‌ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಜತ್‌ ಹೆಗಡೆ ಎಂ.ಎಂ., ಸಿ.ಕೆ. ಮರಿಗೌಡ ಇದ್ದಾರೆ. 
ಆಚಾರ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸೋಮವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ವಿಟಿಯು ಉಪಕುಲಪತಿ ಎಸ್‌. ವಿದ್ಯಾಶಂಕರ್‌ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಜತ್‌ ಹೆಗಡೆ ಎಂ.ಎಂ., ಸಿ.ಕೆ. ಮರಿಗೌಡ ಇದ್ದಾರೆ.    

ಬೆಂಗಳೂರು: ಆಚಾರ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ 891 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಸೋಮವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ 2023ನೇ ಸಾಲಿನಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಉಪಕುಲಪತಿ ಎಸ್. ವಿದ್ಯಾಶಂಕರ್ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಿದರು.

ನಂತರ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಜ್ಞಾನ ಮತ್ತು ಹೊಸ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಬೇಕು. ದಾವಣಗೆರೆಯಲ್ಲಿ ವಿಟಿಯುನ ಸ್ಟಾರ್ಟ್‌ಅಪ್‌ ಕ್ಯಾಂಪಸ್‌ ಪ್ರಾರಂಭವಾಗಲಿದೆ. ಪದವೀಧರರನ್ನು ಉದ್ಯಮಿಗಳನ್ನಾಗುವಂತೆ ಮಾಡುವುದೇ ಇದರ ಉದ್ದೇಶವಾಗಿದೆ. ಇದರಿಂದ, ಅವರು ಉದ್ಯೋಗವನ್ನು ಹುಡುಕುವ ಬದಲು ಉದ್ಯೋಗವನ್ನು ಸೃಷ್ಟಿಸಬಹುದು’ ಎಂದು ಹೇಳಿದರು.

ADVERTISEMENT

ಪ್ರಾಂಶುಪಾಲ ರಜತ್‌ ಹೆಗಡೆ ಎಂ.ಎಂ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಂಸ್ಥೆಯ ಉಪಪ್ರಾಂಶುಪಾಲ ಸಿ.ಕೆ. ಮರಿಗೌಡ ವಾರ್ಷಿಕ ವರದಿಯನ್ನು ಮಂಡಿಸಿದರು. ವಿಶ್ವವಿದ್ಯಾಲಯ ಮಟ್ಟದಲ್ಲಿ ಆಚಾರ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು ಸಂಯೋಜಿತ ಕಾಲೇಜುಗಳ ಶೈಕ್ಷಣಿಕ ಶ್ರೇಣಿಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.