
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಹಿಮಾಚಲ ಪ್ರದೇಶದ ತಿಲಕ್‌ಕುಮಾರ್ (36) ಅವರ ಮೃತದೇಹ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.
ಜೆ.ಪಿ.ನಗರ ಮೊದಲನೇ ಹಂತದ ಪಾದಚಾರಿ ಮಾರ್ಗದಲ್ಲಿ ಮೃತದೇಹ ಪತ್ತೆಯಾಗಿದೆ. ಕತ್ತಿನ ಭಾಗದಲ್ಲಿ ಗಂಭೀರ ಸ್ವರೂಪದ ಗಾಯವಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಕೊಲೆಯೋ? ಆತ್ಮಹತ್ಯೆಯೇ ಎಂಬುದು ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದರು.
ಸುಮಾರು 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ತಿಲಕ್ ಕುಮಾರ್, ಜೆ.ಪಿ.ನಗರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸವಿದ್ದರು. ಹೋಟೆಲ್‌ನಿಂದ ಸ್ವಲ್ಪ ದೂರದಲ್ಲೇ ತಿಲಕ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಸೀನ್ ಆಫ್ ಕ್ರೈಮ್ ಆಫೀಸರ್ಸ್ (ಸೋಕೊ) ತಂಡ ಪರಿಶೀಲನೆ ನಡೆಸಿದೆ. ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.