ADVERTISEMENT

Bengaluru Lit Fest: ಬಹುಭಾಷಿಕ ಜಗತ್ತಿನ ಸಾಹಿತ್ಯ ಹಬ್ಬ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2023, 19:30 IST
Last Updated 3 ಡಿಸೆಂಬರ್ 2023, 19:30 IST
<div class="paragraphs"><p>ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಿದ್ದ ಮಕ್ಕಳು ಕಥೆಗಳನ್ನು ಕೇಳಿ ಸಂಭ್ರಮಿಸಿದರು</p></div>

ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಿದ್ದ ಮಕ್ಕಳು ಕಥೆಗಳನ್ನು ಕೇಳಿ ಸಂಭ್ರಮಿಸಿದರು

   

–ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌

ಬೆಂಗಳೂರು: ಸಾಹಿತ್ಯ, ಸಿನಿಮಾ, ರಾಜಕೀಯ, ವಿಜ್ಞಾನ, ಭಾಷೆ, ಕ್ರೀಡೆಗಳಂಥ ಹಲವು ವಿಷಯಗಳ ಬಗ್ಗೆ ಒಳನೋಟಗಳಿಂದ ಕೂಡಿದ ಚರ್ಚೆ–ಸಂವಾದಗಳಿಗೆ ವೇದಿಕೆಯಾದ ಬೆಂಗಳೂರು ಸಾಹಿತ್ಯೋತ್ಸವದ 12ನೇ ಆವೃತ್ತಿ ಭಾನುವಾರ ಸಂಪನ್ನವಾಯಿತು. 

ADVERTISEMENT

ಬೆಂಗಳೂರು ಲಿಟೇರಚರ್‌ ಫೆಸ್ಟ್‌ (ಬಿಎಲ್‌ಎಫ್‌) ಸಮಿತಿ ಆಯೋಜಿಸಿದ್ದ ಈ ಉತ್ಸವಕ್ಕೆ ಎರಡನೇ ದಿನವೂ ಸಾಹಿತ್ಯಾಸಕ್ತರಿಂದ ಉತ್ತಮ ಸ್ಪಂದನೆ ದೊರೆಯಿತು. ಐದು ವೇದಿಕೆಗಳಲ್ಲಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಲೋಕದ ಆಗುಹೋಗುಗಳ ಬಗ್ಗೆ ಒಂದೆಡೆ ಚಿಂತನ ಮಂಥನ ನಡೆದರೆ, ಇನ್ನೊಂದೆಡೆ ಹೊಸ ಪುಸ್ತಕಗಳ ಹೂರಣಗಳ ಬಗ್ಗೆ ಅವಲೋಕನ ನಡೆಯಿತು. ಮಕ್ಕಳ ಕಲರವ ಉತ್ಸವದ ಮೆರಗನ್ನು ಹೆಚ್ಚಿಸಿತು. 

ಹಿಂದೂಸ್ಥಾನಿ ಸಂಗೀತ, ಯಕ್ಷಗಾನ ತಾಳಮದ್ದಳೆಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ರಂಜಿಸಿತು. ನಗರದ ವಿವಿಧೆಡೆಯಿಂದ ಬಂದ ಸಾಹಿತ್ಯಾಸಕ್ತರು, ಬೆಳಿಗ್ಗೆಯಿಂದ ಸಂಜೆಯವರೆಗೆ ಉತ್ಸಾಹದಿಂದ ಗಹನವಾದ ಚರ್ಚೆಗಳನ್ನು ಆಲಿಸಿದರು. ದೇಶದ ವಿವಿಧೆಡೆಗಳಿಂದ ಬಂದಿದ್ದ ವಿದ್ವಾಂಸರು, ಲೇಖಕರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಹಂಚಿಕೊಂಡ ಹೊಳಹುಗಳ ಬೆಳಕಿನೊಂದಿಗೆ ಈ ಉತ್ಸವ ಕಳೆಗಟ್ಟಿತು. ತಮ್ಮಿಷ್ಟದ ಸಾಹಿತಿಗಳ ಮಾತುಗಳನ್ನು ಆಲಿಸಿದ ಅಭಿಮಾನಿ ಬಳಗ, ಪುಸ್ತಕಗಳಿಗೆ ಅವರ ಹಸ್ತಾಕ್ಷರಗಳನ್ನು ಪಡೆದುಕೊಂಡಿತು. 

ಬೆಂಗಳೂರು ಸಾಹಿತ್ಯ ಉತ್ಸವದ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಸಾಹಿತ್ಯಾಸಕ್ತರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌

ಮಕ್ಕಳಿಗೆ ಪ್ರತ್ಯೇಕವಾಗಿ ನಾಲ್ಕು ವೇದಿಕೆಗಳನ್ನು ರೂಪಿಸಲಾಗಿತ್ತು. ಮಕ್ಕಳ ಜತೆಗೆ ಸಂಭಾಷಣೆ ನಡೆಸಿದ ಲೇಖಕರು, ಕಥೆಗಳನ್ನು ಹೇಳಿ ರಂಜಿಸಿದರು. ಅಮರ ಚಿತ್ರಕಥಾ ರಸಪ್ರಶ್ನೆ, ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.