ಬಂಧನ
ಬೆಂಗಳೂರು: ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಭುವನೇಶ್ವರ–ಬೆಂಗಳೂರು ನಡುವೆ ಸಂಚರಿಸುವ ಪ್ರಶಾಂತಿ ಎಕ್ಸ್‌ಪ್ರೆಸ್‌ನಲ್ಲಿ ಸಾಗಿಸುತ್ತಿದ್ದ ₹1.27 ಲಕ್ಷ ಮೌಲ್ಯದ ಗಾಂಜಾವನ್ನು ಪತ್ತೆ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ.
ಒಡಿಶಾದ ಸುಂದರಪುರ ನಿವಾಸಿ, ಸುದರ್ಶನ್ ಜೇನಾ (35) ಬಂಧಿತ ಆರೋಪಿ.
ಎಕ್ಸ್‌ಪ್ರೆಸ್ ರೈಲಿನಿಂದ ಇಳಿದ ಆರೋಪಿ ನಗರದಲ್ಲಿ ಕೈಯಲ್ಲಿ ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ. ವಶಕ್ಕೆ ಪಡೆದು ಬ್ಯಾಗ್ ಪರಿಶೀಲಿಸಿದಾಗ ಹಳದಿ ಟೇಪ್‌ನಲ್ಲಿ ಬಂಡಲ್ ಮಾಡಿದ್ದ 3.174 ಕೆ.ಜಿ. ಗಾಂಜಾ ಪತ್ತೆಯಾಯಿತು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.