ADVERTISEMENT

ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಕಾಲರಾ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 4:25 IST
Last Updated 6 ಏಪ್ರಿಲ್ 2024, 4:25 IST
<div class="paragraphs"><p>(ಪ್ರಾತಿನಿಧಿಕ ಚಿತ್ರ)</p></div>

(ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ(ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲರಾದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ಧಾರೆ ಎಂದು ಸಹಪಾಠಿಗಳು ಹೇಳಿದ್ದು, ಆಸ್ಪತ್ರೆಯ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ 20 ಮಂದಿ, ಎಚ್‌–ಬ್ಲಾಕ್‌ನಲ್ಲಿ 15 ಹಾಗೂ 4 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

‘ಎಲ್ಲ ವಿದ್ಯಾರ್ಥಿಗಳು ಭೇದಿ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ಧಾರೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ’ ಎಂದು ಡೀನ್ ರಮೇಶ್ ಕೃಷ್ಣ ಮಾಹಿತಿ ನೀಡಿದ್ಧಾರೆ.

‘ಪಿ.ಜಿಯ ಹಲವು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸ್ಟೆಲ್‌ನಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಕಾಲರಾ ಕಾಣಿಸಿಕೊಂಡಿದೆ’ ಎಂದು ಹಾಸ್ಟೆಲ್‌ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

‘ಎಲ್ಲ ವಿದ್ಯಾರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ಬಳಿಕ ನಿಖರವಾದ ಕಾರಣ ತಿಳಿಯಲಿದೆ. ಅದುವರೆಗೂ ಹಾಸ್ಟೆಲ್‌ನ ನೀರು ಬಳಕೆ ಮಾಡದಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲೂ ಸುಡಲಿದೆ ಬಿಸಿಲು

ನಗರದಲ್ಲೂ ಮುಂದಿನ ಎರಡು ದಿನಗಳ ಕಾಲ ಸುಡು ಬಿಸಿಲು ಇರಲಿದೆ. ಗರಿಷ್ಠ ಉಷ್ಣಾಂಶ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ದಾಟುವ ಸಾಧ್ಯತೆಯಿದೆ.ಬೆಳಿಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಳಿಕ ನಿರ್ಮಲ ಆಕಾಶ ಕಾಣಿಸಲಿದೆ. ನಗರದಲ್ಲಿ ಶುಕ್ರವಾರ ಗರಿಷ್ಠ ಉಷ್ಣಾಂಶ 37 ಹಾಗೂ ದೇವನಹಳ್ಳಿ ವಿಮಾನ ನಿಲ್ದಾಣದ ಸುತ್ತಮುತ್ತ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.